ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೇನ್ ನಿಧನ: ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರ ಸಂತಾಪ

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೇನ್ ನಿಧನ: ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರ ಸಂತಾಪ

ಬೆಂಗಳೂರು: ಗುಜರಾತ್ ನ ಅಹಮದಾಬಾದ್ ನಲ್ಲಿನ ಯುಎಸ್ ಮೆಹ್ತಾ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ಮೋದಿ (100) ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.ಈ ಬಗ್ಗೆ ಟ್ವಿಟ್ ಮಾಡಿರುವಂತ ಸಿಎಂ ಬೊಮ್ಮಾಯಿ ಅವರು, ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದಿದ್ದಾರೆ.

ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು, ಈ ದೇಶಕ್ಕೆ ಮಹಾನ್ ನಾಯಕನನ್ನು ನೀಡಿದಂತಹ ಭಾರತೀಯರೆಲ್ಲರಿಗೂ ಮಾತೃ ಸ್ವರೂಪಿಯಾದ ಶ್ರೀಮತಿ ಹೀರಾ ಬೆನ್ ಅವರ ನಿಧನದಿಂದ ಭಾರತ ಹಿರಿಯ ಚೇತನವೊಂದನ್ನು ಕಳೆದುಕೊಂಡಿದೆ. ಭಾರತವನ್ನು ಮುನ್ನಡೆಸುವ ಸಮರ್ಥ ನಾಯಕನನ್ನು ನಮ್ಮೆಲ್ಲರಿಗೂ ಕೊಡುಗೆಯಾಗಿ ನೀಡಿದ ಆ ತಾಯಿಯ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ ಹಾಗೂ ಅವರ ನಿಧನದಿಂದ ಅವರ ಕುಟುಂಬಸ್ಥರಿಗೆ ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಆಗಿರುವ ದುಃಖದಲ್ಲಿ ನಾನು ಭಾಗಿ. ಈ ದುಃಖವನ್ನು ಸೈರಿಸುವ ಶಕ್ತಿಯನ್ನು ದಯಾಘನನಾದ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಟ್ವಿಟ್ ಮಾಡಿ, ಹಿಂದೂಸ್ಥಾನವು ಎಂದೂ ಮರೆಯದ ಭಾರತ ರತ್ನವನ್ನು ಹೆತ್ತ ಆ ಮಹಾ ತಾಯಿಯ ಆತ್ಮಕ್ಕೆ ಸದ್ಗತಿ ದೊರೆಯಲಿ. ಪ್ರಧಾನಿ ಮೋದಿ ಅವರಿಗೆ, ಅವರ ಕುಟುಂಬ ಸದಸ್ಯರಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ನೈನಂ ಛಿಂದಂತಿ ಶಸ್ತ್ರಾಣಿ ನೈನಂ ದಹತಿ ಪಾವಕಃ| ನಚೈನಂ ಕ್ಲೇದಯಂತ್ಯಾಪೋ ನ ಶೋಷಯತಿ ಮಾರುತಃ ಎಂದು ತಿಳಿಸಿದ್ದಾರೆ.

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈ ದೇಶಕ್ಕೆ ಮಹಾನ್ ನಾಯಕನನ್ನು ನೀಡಿದಂತಹ ಭಾರತೀಯರೆಲ್ಲರಿಗೂ ಮಾತೃ ಸ್ವರೂಪಿಯಾದ ಶ್ರೀಮತಿ ಹೀರಾ ಬೆನ್ ಅವರ ನಿಧನದಿಂದ ಭಾರತ ಹಿರಿಯ ಚೇತನವೊಂದನ್ನು ಕಳೆದುಕೊಂಡಿದೆ. ಭಾರತವನ್ನು ಮುನ್ನಡೆಸುವ ಸಮರ್ಥ ನಾಯಕನನ್ನು ನಮ್ಮೆಲ್ಲರಿಗೂ ಕೊಡುಗೆಯಾಗಿ ನೀಡಿದ ಆ ತಾಯಿಯ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ ಹಾಗೂ ಅವರ ನಿಧನದಿಂದ ಅವರ ಕುಟುಂಬಸ್ಥರಿಗೆ ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಆಗಿರುವ ದುಃಖದಲ್ಲಿ ನಾನು ಭಾಗಿ. ಈ ದುಃಖವನ್ನು ಸೈರಿಸುವ ಶಕ್ತಿಯನ್ನು ದಯಾಘನನಾದ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಟ್ವಿಟ್ ಮಾಡಿ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ನಿಧನಕ್ಕೆ ಸಂತಾಪಗಳು. ಅವರು ಪೂರ್ಣ ಜೀವನ ನಡೆಸಿ, ಶತಾಯುಷಿಯಾಗಿದ್ದರು. ಇಂತಹ ತಾಯಿ ಮಕ್ಕಳನ್ನು ತಿದ್ದರು, ಬುದ್ಧಿ ಹೇಳಲು, ಕೆಲಸದಲ್ಲಿ ಶಕ್ತಿ ತುಂಬಲು ಇರಬೇಕು. ಅವರ ಅಗಲಿಕೆಯನ್ನು ಭರಿಸುವಂತ ಶಕ್ತಿಯನ್ನು ಮೋದಿಯವರಿಗೆ ನೀಡಲಿ. ಓಂ ಶಾಂತಿ ಎಂದು ಹೇಳಿದ್ದಾರೆ.