ಪ್ರಧಾನಿ ಮೋದಿ ಕರ್ನಾಟಕ ಭೇಟಿಗೆ ಮುಹೂರ್ತ ಫಿಕ್ಸ್

ಪ್ರಧಾನಿ ಮೋದಿ ಕರ್ನಾಟಕ ಭೇಟಿಗೆ ಮುಹೂರ್ತ ಫಿಕ್ಸ್

ಬೆಳಗಾವಿ: ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ಯವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರು ಆಗಮಿಸಿ ಈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದರು. ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದು,ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.