ನಾಳೆ ರಾಜ್ಯಪಾಲರ ಕಲಬುರಗಿ ಪ್ರವಾಸ : ಪ್ರಧಾನಿ ಮೋದಿ ಜೊತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ನಾಳೆ ರಾಜ್ಯಪಾಲರ ಕಲಬುರಗಿ ಪ್ರವಾಸ : ಪ್ರಧಾನಿ ಮೋದಿ ಜೊತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಲಬುರಗಿ : ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಜನವರಿ 19 ರಂದು ನಾಳೆ ಗುರುವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು ಬರಮಾಡಿಕೊಳ್ಳಲಿದ್ದಾರೆ.

ನಂತರ ಕಲಬುರಗಿ ವಿಮಾನ ನಿಲ್ದಾಣದಿಂದ ಪ್ರಧಾನಮಂತ್ರಿಗಳೊಂದಿಗೆ ಹೆಲಿಕ್ಯಾಪ್ಟರ್ ಮೂಲಕ ಬೆಳಿಗ್ಗೆ 11.05 ಗಂಟೆಗೆ ಹೊರಟು ಬೆಳಿಗ್ಗೆ 11.50 ಗಂಟೆಗೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಹೆಲಿಪ್ಯಾಡ್ಗೆ ಆಗಮಿಸುವರು.

ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿಗಳೊಂದಿಗೆ ಕೊಡೇಕಲ್ದಲ್ಲಿ ಆಯೋಜಿಸಿರುವ ವಿವಿಧ ಕಾಮಗಾರಿಗಳ ಉದ್ಘಾಟನಾ ಹಾಗೂ ಇನ್ನಿತರ ಯೋಜನೆಗಳಿಗೆ ಅಡಿಗಲ್ಲು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಅಂದು ಮಧ್ಯಾಹ್ನ 1.15 ಗಂಟೆಗೆ ಕೊಡೇಕಲ್ ಹೆಲಿಪ್ಯಾಡ್ದಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 2 ಗಂಟೆಗೆ ಮಳಖೇಡ ಹೆಲಿಪ್ಯಾಡ್ಗೆ ಆಗಮಿಸುವರು. ನಂತರ ಮಧ್ಯಾಹ್ನ 2.15 ಗಂಟೆಗೆ ಮಳಖೇಡದಲ್ಲಿ ಪ್ರಧಾನಮಂತ್ರಿಗಳೊಂದಿಗೆ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3.10 ಗಂಟೆಗೆ ಮಳಖೇಡ ಹೆಲಿಪ್ಯಾಡ್ದಿಂದ ಹೆಲಿಕ್ಯಾಪ್ಟರ್ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಪ್ರಧಾನಮಂತ್ರಿಯವರನ್ನು ಬೀಳ್ಕೋಡುವರು. ನಂತರ ಮಧ್ಯಾಹ್ನ 3.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಗುಲಬರ್ಗಾ ವಿಶ್ವವಿದ್ಯಾಲಯದ ಗೆಸ್ಟ್ ಹೌಸ್ಗೆ ಆಗಮಿಸಿ ವಾಸ್ತವ್ಯ ಮಾಡುವರು. ಜನವರಿ 20 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.