ಪ್ರಧಾನಿ ಮೋದಿ ವಿರುದ್ಧ ನಿಂದನೆ : ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ವಿರುದ್ಧ ದೂರು

ಹೊಸಪೇಟೆ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನೆ ಆರೋಪದಡಿ ಹೂವಿನಹಡಗಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ವಿರುದ್ಧ ದೂರು ದಾಖಲಾಗಿದೆ.
ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರ್ ಅವರು ಕೆಲ ದಿನಗಳ ಹಿಂದೆ ತಮ್ಮ ಕಾರ್ಯಕರ್ತರೊಂದಿಗೆ ಮಾತನಾಡುತ್ತಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಕುರಿತಂತೆ ಅವಾಚ್ಯ ಶಬ್ದಗಳಿಂದ ಬೈದಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಹರಹಪನಹಳ್ಳಿ ತಾಲೂಕು ಬಿಜೆಪಿ ಘಟಕದಿಂದ ಪಿ.ಟಿ. ಪರಮೇಶ್ವರ್ ನಾಯ್ಕ್ ವಿರುದ್ದ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.