ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರವನ್ನು ಟೀಕಿಸಿದ್ದ ಕೈ ನಾಯಕ ಪಕ್ಷಕ್ಕೆ ರಾಜೀನಾಮೆ
ನವದೆಹಲಿ: 2002ರ ಗುಜರಾತ್ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಪ್ರದರ್ಶಿಸುವುದನ್ನು ವಿರೋಧಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ವಿರೋಧಿಸಿ ಕಾಮೆಂಟ್ ಮಾಡಿದ ಒಂದು ದಿನದ ನಂತರ ಅನಿಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅನಿಲ್ ಆಂಟೋನಿ ಇಂದು ಟ್ವಿಟರ್‌ನಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದಾರೆ.
2002 ರ ಗುಜರಾತ್ ಗಲಭೆಗಳ ಸಾಕ್ಷ್ಯಚಿತ್ರದ ವಿವಾದದ ನಡುವೆ, ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಅನಿಲ್ ಆಂಟೋನಿ ಅವರು ಬಿಬಿಸಿಯನ್ನು ಪೂರ್ವಾಗ್ರಹಗಳ ಸುದೀರ್ಘ ಇತಿಹಾಸ ಹೊಂದಿರುವ ರಾಜ್ಯ ಪ್ರಾಯೋಜಿತ ಚಾನೆಲ್ ಎಂದು ಪರಿಗಣಿಸುವುದಾಗಿ ಮಂಗಳವಾರ ಹೇಳಿದ್ದರು.
ಇದರ ಬೆನ್ನಲ್ಲೇ, ಪಕ್ಷದಿಂದಲೇ ಟೀಕೆಗೆ ಗುರಿಯಾಗಿರುವುದಾಗಿ ಹೇಳಿಕೊಂಡಿದ್ದು, ಅನೇಕ ನಿಂದನೆ ಕರೆಗಳೂ ಬಂದಿವೆ. ನಾನು ಎಲ್ಲೇ ಇದ್ರೂ ನನ್ನ ಜೀವನ ಮುಂದೆ ಸಾಗುತ್ತದೆ. ಹೀಗಾಗಿ ನಾನು ಕಾಂಗ್ರೆಸ್‌ನ ಎಲ್ಲಾ ಜವಾಬ್ದಾರಿಗಳಿಗೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.