ಪ್ರಧಾನಿ ಮೋದಿಯಿಂದ ಕನಕದಾಸ ಪ್ರತಿಮೆಗೆ ಪುಷ್ಪಾರ್ಚನೆ

ಬೆಂಗಳೂರು : ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದು, ನಂತರ ವಿಧಾನಸೌಧಕ್ಕೆ ಬಂದ ಪ್ರಧಾನಿ ಮೋದಿ ಕನಕದಾಸ ಪುತ್ಥಳಿಗೆ ನಮನ ಸಲ್ಲಿಸಿದರು.
ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ.
ಇಂದು ಕನಕದಾಸರ ಜಯಂತಿಯ ಶುಭ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಶ್ರೀ ಕನಕದಾಸರಿಗೆ ಗೌರವ ನಮನ ಸಲ್ಲಿಸಿದೆ. ಭಕ್ತಿಯ ಮಾರ್ಗವನ್ನು ತೋರಿಸಿ, ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿ, ಸಾಮಾಜಿಕ ಏಕತೆಯ ಸಂದೇಶವನ್ನು ಸಾರಿದ ಸಂತ ಕನಕದಾಸರಿಗೆ ನಾವು ಸದಾ ಚಿರಋಣಿಗಳಾಗಿರುತ್ತೇವೆ. pic.twitter.com/sEdGT5qGoD
— Narendra Modi (@narendramodi) November 11, 2022