ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ NIA
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ-ಎನ್ ಐ ಎ ಬಹುಮಾನ ಘೋಷಣೆ ಮಾಡಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್ ಐ ಎ ಮೂವರು ಆರೋಪಿಗಳನ್ನು ಬಂಧಿಸಿದೆ.
ಆರೋಪಿ ಷರೀಫ್ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತ್ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಅವರ ಪುತ್ರ. ಇನ್ನು ಮಸೂದ್ ನೆಕ್ಕಿಲಾಡಿಯ ಅಗ್ನಾಡಿ ಹೌಸ್ ಅಬೂಬಕ್ಕರ್ ಅವರ ಮಗ ಎಂದು ತಿಳಿದುಬಂದಿದೆ. ಆರೋಪಿಗಳ ಸುಳಿವು ಸಿಕ್ಕಲ್ಲಿ ಬೆಂಗಳೂರಿನ ದಮ್ಮಲೂರು ಎನ್ ಐ ಎ ಎಸ್ ಪಿ ಗೆ ಮಾಹಿತಿ ನೀಡುವಂತೆ ತಿಳಿಸಿದೆ.