'ಪ್ರವೀಣ್ ನೆಟ್ಟಾರು' ಹತ್ಯೆ ಪ್ರಕರಣ :1500 ಪುಟಗಳ ಚಾರ್ಜ್ ಶೀಟ್ , 20 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
240 ಸಾಕ್ಷಿಗಳ ಹೇಳಿಕೆಗಳು ಸೇರಿ ಒಟ್ಟು 20 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ನಿನ್ನೆ ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್ ಗೆ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ, ಈ ಪ್ರಕರಣದಲ್ಲಿ ಇದುವರೆಗೆ 14 ಮಂದಿಯನ್ನು ಬಂಧಿಸಲಾಗಿದ್ದು, 6 ಮಂದಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿರುವ ಎನ್‌ಐಎ ಅಧಿಕಾರಿಗಳು, ಪತ್ತೆಯಾಗದ ಹಿನ್ನಲೆಯಲ್ಲಿ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಇನ್ನೂ ನಿಗೂಢವಾಗಿಯೇ ಉಳಿದಿದೆ. ಆರು ಆರೋಪಿಗಳ ಪತ್ತೆ ಒಟ್ಟು 19 ಲಕ್ಷ ರೂಪಾಯಿ ಬಹುಮಾನ ಘೋಷಣೆ ಆಗಿದೆ. ದಕ್ಷಿಣ ಕನ್ನಡ ಬಿಜೆಪಿ ಯುವ ನೇತಾರ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26 ರಂದು ಬೆಳ್ಳಾರೆಯ ಅವರ ಕೋಳಿ ಅಂಗಡಿ ಸಮೀಪವೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಬೆಳ್ಳಾರೆಯಿಂದ ಪೆರುವಾಜೆಗೆ ಹೋಗುವ ಕ್ರಾಸ್ ಬಳಿ ಬೈಕೊಂದರಲ್ಲಿ ಬಂದ ಮೂವರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಮೇಲೆ ಮಾರಾಕಾಸ್ತ್ರಗಳಿಂದ ಏಕಾಕಿ ದಾಳಿ ನಡೆಸಿ ಹತ್ಯೆ ಮಾಡಿದ್ದರು.