ಪ್ರಶ್ನೆ ಮಾಡಿದರೆ ಕೊಲ್ಲುವ ಸ್ಥಿತಿ ಇದೆ: ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಆತಂಕ

ಪ್ರಶ್ನೆ ಮಾಡಿದರೆ ಕೊಲ್ಲುವ ಸ್ಥಿತಿ ಇದೆ: ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಆತಂಕ

ತುಮಕೂರು: 'ದೇಶದಲ್ಲಿ ಪ್ರಶ್ನೆ, ವಿಮರ್ಶೆ, ಟೀಕೆ ಮಾಡುವವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುತ್ತಿದೆ. ಇಲ್ಲವೇ ಎನ್‌ಕೌಂಟರ್‌ನಲ್ಲಿ ಸಾಯಿಸುವ ಸನ್ನಿವೇಶ ಸೃಷ್ಟಿಯಾಗಿದೆ' ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್‌ ಆತಂಕ ವ್ಯಕ್ತಪಡಿಸಿದರು.

ನಗರ ಹೊರವಲಯದ ಅಗಳಕೋಟೆಯಲ್ಲಿ ಬುಧವಾರ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನ
ದಲ್ಲಿ ಮಾತನಾಡಿದರು.

'ಪೆಗಾಸಸ್‌ ಎಂಬ ಕುತಂತ್ರಾಂಶ ಬಳಸಿ, ಗೋಪ್ಯವಾಗಿ ರಕ್ಷಿಸಿಕೊಂಡು ಬಂದು ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದ್ದಾರೆ' ಎಂದರು.