ಸಾಕು ಪ್ರಾಣಿ ಅಂಗಡಿ' ಮಾಲೀಕರಿಗೆ ಬಿಗ್ ಶಾಕ್ : ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಕಡ್ಡಾಯ

ಸಾಕು ಪ್ರಾಣಿ ಅಂಗಡಿ' ಮಾಲೀಕರಿಗೆ ಬಿಗ್ ಶಾಕ್ : ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಸಾಕು ಪ್ರಾಣಿ ಮಾರಾಟಗಾರರು ಪೆಟ್ ಶಾಪ್ ಗಳನ್ನು ತೆರೆಯಲು ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಸಾಕು ಪ್ರಾಣಿ ಮಾರಾಟಗಾರರು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳದೇ ಪೆಟ್ ಶಾಪ್ ತೆರೆದಿದ್ದರೆ ಯಾವುದೇ ಮುನ್ಸೂಚನೆ ಇಲ್ಲದೇ ಕ್ರಮ ಕೈಗೊಳ್ಳಲಾಗುವುದು.

ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ಪಿಸಿಎ) ಕಾಯ್ದೆ 1960, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, ನಾಯಿ ಸಾಕಣೆ ಮಾರುಕಟ್ಟೆ ನಿಯಮಗಳು 2017 ಮತ್ತು ಪೆಟ್ ಶಾಪ್ ನಿಯಮಗಳು 2018 ರ ಅಡಿಯ ಪೆಟ್ ಶಾಪ್ ಗಳಿಗೆ ನೋಂದಣಿ ಮಾಡಿಸಬೇಕು ಎಂದು ಹೇಳಿದ್ದಾರೆ.

ಪೆಟ್ ಶಾಪ್ ಗಳಲ್ಲಿ ಶುಚಿತ್ವ ಇಲ್ಲದಿರುವುದು, ಸಣ್ಣ ಮರಿಗಳನ್ನು ಮಾರಾಟ ಮಾಡುತ್ತಿರುವುದು, ನಾಯಿಗಳು ಸತ್ತಿರುವುದು, ಅಸಮರ್ಪಕ ಆಹಾರ ಪೂರೈಕೆ ಕುರಿತು ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಅಂಗಡಿ ಮಾಲೀಕರು ಪ್ರಾಣಿಗಳ ಪೋಷಣೆ, ಸೂಕ್ತ ಚಿಕಿತ್ಸೆ ನೀಡದಿರುವುದು ಕಂಡು ಬಂದರೆ ಸಾರ್ವಜನಿಕರು ಸಹಾಯವಾಣಿ 8277100200ಗೆ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ.