ಪ್ರಾಥಮಿಕ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

ಪ್ರಾಥಮಿಕ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಬಿಡುಗಡೆ ಮಾಡಿದೆ. 13,363 ಪರೀಕ್ಷಾರ್ಥಿಗಳು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದು, 3 ತೃತೀಯ ಲಿಂಗಿಗಳು ಆಯ್ಕೆಯಾಗಿರುವುದು ವಿಶೇಷ. ಸುದ್ದಿಗೋಷ್ಠಿಯಲ್ಲಿಮಾಹಿತಿ ನೀಡಿದ ಸಚಿವ ಬಿ.ಸಿ. ನಾಗೇಶ್, 34 ಇಂಜಿನಿಯರಿಂಗ್ ಅಭ್ಯರ್ಥಿಗಳ ಪೈಕಿ 19 ಜನರು ಆಯ್ಕೆಯಾಗಿದ್ದಾರೆ ಎಂದರು.