ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಮುಂಬೈನ ದೂರದ ಉಪನಗರವಾದ ವಿರಾರ್‌ನ ಸಾಯಿನಾಥ್ ನಗರ ಪ್ರದೇಶದ ನಿವಾಸಿಗಳಾದ ಇಬ್ಬರ ವಿರುದ್ಧ ಪೊಲೀಸರು ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಾರೆ.
ಇಬ್ಬರು ವಾಕಿಂಗ್ಗೆ ಹೋಗಿದ್ದಾಗ ಘಟನೆ ನಡೆದಿದೆ, ಈ ವಿಚಾರ ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾಗಿ ಅವರು ತಿಳಿಸಿದ್ದಾರೆ.
ಮತ್ತಷ್ಟು ಓದಿ:
ಆರೋಪಿ ಹಾಗೂ ಆಕೆಯ ಪ್ರಿಯಕರನ ನಡುವೆ ವಾಗ್ವಾದ ನಡೆದು ಇಬ್ಬರು ಖಾಲಿ ಬಿಯರ್ ಬಾಟಲಿಯಿಂದ ಹೊಡೆದು, ಇಬ್ಬರೂ ಸೇರಿ ಯುವಕನನ್ನು ಮರಕ್ಕೆ ಕಟ್ಟಿಹಾಕಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಂತರ ಇಬ್ಬರೂ ಯುವತಿಯನ್ನು ಪ್ರತ್ಯೇಕ ಸ್ಥಳಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆ ಆರೋಪಿಗಳಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ, ಮನೆಗೆ ತಲುಪಿ ವಿಷಯ ತಿಳಿಸಿದ ಬಳಿಕ ಪೊಲೀಸರ ಸಹಾಯದಿಂದ ಆ ಯುವಕನನ್ನೂ ರಕ್ಷಿಸಲಾಯಿತು.