ಪ್ರಿಯಾಂಕ ಖರ್ಗೆ ವಿರುದ್ಧ ಬಾಬುರಾವ್ ಚಿಂಚಸನೂರ್ ಆಕ್ರೋಶ

ಬೆಂಗಳೂರು: ಎಸ್‌ಟಿ ಸಮುದಾಯದ ಮೀಸಲಾತಿ ವಿಚಾರದಲ್ಲಿ ನನ್ನ ಹೇಳಿಕೆ ತಿರುಚಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ನಾಚಿಕೆಯಾಗಬೇಕು ಎಂದು ಮಾಜಿ ಸಚಿವ ಬಾಬುರಾವ್ ಚಿಂಚಸನೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೀಸಲಾತಿಯಿಂದ ಜಿಲ್ಲಾ, ತಾಲೂಕು ಪಂಚಾಯಿತಿ ಸೇರಿ ಎಲ್ಲ ಚುನಾವಣೆಗಳಲ್ಲೂ ಸಮುದಾಯದವರಿಗೆ ಅನುಕೂಲವಾಗಲಿದೆ.
ರಾಜ್ಯದ ಎಸ್‌ಟಿ ಸಮುದಾಯಕ್ಕೆ ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದೆ. ಶ್ರೀರಾಮುಲು ಅವರು ಸತತ ಹೋರಾಟ ಫಲವಾಗಿ ಮುಖ್ಯಮಂತ್ರಿಯವರು ಹಾಗೂ ಬಿಜೆಪಿ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.