ಪ್ರೇಮಿಗಳ ದಿನಾಚರಣೆಗೆ ಅಡ್ಡಿ ಆತಂಕ; ಪಾರ್ಕ್‌ , ಮಾಲ್‌ ಗಳಲ್ಲಿ ಖಾಕಿ ಹೈ ಅಲರ್ಟ್‌

ಪ್ರೇಮಿಗಳ ದಿನಾಚರಣೆಗೆ ಅಡ್ಡಿ ಆತಂಕ; ಪಾರ್ಕ್‌ , ಮಾಲ್‌ ಗಳಲ್ಲಿ ಖಾಕಿ ಹೈ ಅಲರ್ಟ್‌

ಬೆಂಗಳೂರು: ಪ್ರೇಮಿಗಳ ದಿನಾಚರಣೆ ಹತ್ರ ಬರುತ್ತಿದೆ. ಹೀಗಾಗಿ ಪ್ರೇಮಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಲಿದೆ. ಆದರೆ ಹಿಂದೂ ಪರ ಸಂಗಟನೆಗಳು ಈ ಆಚರಣೆ ಮಾಡುವುದು ಸರಿಯಲ್ಲ ಎಂದು ಪ್ರವರ್ಷ ವರ್ಷ ಅಡ್ಡಿ ಪಡಿಸುತ್ತಿದ್ದಾರೆ.

ಈಗಾಗಲೇ ಪ್ರೇಮಿಗಳ ದಿನಾಚರಣೆ ಮಾಡಬಾರದು. ಇದನ್ನ ತಂದೆ-ತಾಯಂದಿರ ದಿನವನ್ನಾಗಿ ಆಚರಣೆ ಮಾಡಬೇಕು ಅಂತಾ ಕರೆ ಕೊಡಲಾಗಿದೆ. ಅದಕ್ಕೂ ಮೀರಿ ಪ್ರೇಮಿಗಳ ದಿನಾಚರಣೆಗೆ ಅನುಮತಿ ನೀಡಬಾರದು ಅಂತಾ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿವೆ.

ಪ್ರತಿ ವರ್ಷದಂತೆ ಈ ವರ್ಷವೂ ಈ ರೀತಿ ದಿನಾಚರಣೆಗೆ ವಿರೋಧ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ನೈತಿಕ ಪೊಲೀಸ್‌ಗಿರಿ ನಡೆಯೋ ಭಯದಲ್ಲಿ ಇರೋ ಪೊಲೀಸರು ಪಾರ್ಕ್‌ಗಳಲ್ಲಿ, ಮಾಲ್‌ಗಳಲ್ಲಿ ಎಚ್ಚರಿಕೆ ವಹಿಸುವಂತೆ ಕಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಪಾರ್ಕ್‌ ಗಳಲ್ಲಿ ಪ್ರೇಮಿಗಳೇ ಎಚ್ಚರಿಕೆ ವಹಿಸಬೇಕಿದೆ. ಮಾಲ್‌ಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮಾಲ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.