ಪ್ರೊಫೆಸರ್ ಹುದ್ದೆಗೆ ಬಡ್ತಿ ನೀಡಲು ಸರ್ಕಾರ ತೀರ್ಮಾನ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರುಗಳಿಗೆ ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವೃತ್ತಿ ಸುಧಾರಣೆ ಆಯ್ಕೆ ಸಮಿತಿ ತೀರ್ಮಾನದ ಮೇಲೆ ಹೆಜ್ಜೆ ಇಡಲಾಗುತ್ತಿದೆ. ಯುಜಿಸಿ ಸಹ ಪ್ರಾಧ್ಯಾಪಕರಿಗೆ ಪ್ರೊಫೆಸರ್‍ಗಳಾಗಿ ಬಡ್ತಿ ನೀಡಬಹುದೆಂದು 2010ರಲ್ಲೇ ಹೇಳಿದೆ. ಕಳೆದ 12 ವರ್ಷಗಳಿಂದ ಈ ವಿಚಾರದಲ್ಲಿ ಯಾವ ಪ್ರಗತಿಯೂ ಆಗಿರಲಿಲ್ಲ. ಈಗ ಸರ್ಕಾರ ಬಡ್ತಿ ನೀಡಲು ಅಧಿಸೂಚನೆ ಹೊರಡಿಸಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.