ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ದುರಂತ; ಧಗಧಗನೆ ಹೊತ್ತಿ ಉರಿದ ಫ್ಯಾಕ್ಟರಿ

ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ದುರಂತ; ಧಗಧಗನೆ ಹೊತ್ತಿ ಉರಿದ ಫ್ಯಾಕ್ಟರಿ

ಬೆಂಗಳೂರು: ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶಲ್ಲಿ ನಡೆದಿದೆ.

ಪ್ಲಾಸ್ಟಿಕ್ ಚೀಲಗಳನ್ನು ತಯಾರಿಸುತ್ತಿದ್ದ ಸನ್ ಸೇನೆ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ.

ಕ್ಷಣಾರ್ಧದಲ್ಲಿ ಇಡೀ ಕಾರ್ಖಾನೆ ಧಗಧಗನೆ ಹೊತ್ತಿ ಉರಿದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.