ಫೆ. 24 ರಿಂದ ಕಲಬುರಗಿಯಲ್ಲಿ 'ಕಲ್ಯಾಣ ಕರ್ನಾಟಕ ಉತ್ಸವ' : ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜನೆ

ಫೆ. 24 ರಿಂದ ಕಲಬುರಗಿಯಲ್ಲಿ 'ಕಲ್ಯಾಣ ಕರ್ನಾಟಕ ಉತ್ಸವ' : ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜನೆ

ಲಬುರಗಿ : ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಇವುಗಳ ಸಂಯುಕ್ತಾಶ್ರಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಬೃಹತ್ ಮಟ್ಟದ ಪ್ರದರ್ಶನ ಮೇಳ ಹಾಗೂ ಮಾರಾಟ ಮಳಿಗೆಗಳನ್ನು ಇದೇ ಫೆಬ್ರವರಿ 24 ರಿಂದ 26 ರವರೆಗೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ಉತ್ಸವದ ಪ್ರದರ್ಶನ ಸಮಿತಿಯು ತಿಳಿಸಿದೆ.

ಮೇಲ್ಕಂಡ ದಿನದಂದು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಈ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಪ್ರದರ್ಶನದಲ್ಲಿ ಸಾವಯವ ಮತ್ತು ಸಿರಿಧಾನ್ಯಗಳ ಮೇಳ, ಸಮಗ್ರ ಕೃಷಿ ಪದ್ಧತಿ ಪ್ರಾತ್ಯಕ್ಷಿಕೆ, ಫಲಪುಷ್ಪ ಪ್ರದರ್ಶನ, ಮತ್ಸ್ಯ ಮೇಳ, ಸ್ವಸಹಾಯ ಸಂಘಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ, ಎಫ್.ಪಿ.ಓ.ಗಳ ಉತ್ಪನ್ನಗಳ ಪ್ರದರ್ಶನ, ನವೀನ ಕೃಷಿ ಹಾಗೂ ಯಂತ್ರೋಪಕರಣಗಳ ಪ್ರದರ್ಶನವನ್ನು ಸಹ ಹಮ್ಮಿಕೊಳ್ಳಲಾಗಿದೆ. ಇದಲ್ಲದೇ ಫೆಬ್ರವರಿ 25 ಹಾಗೂ 26 ರಂದು ನೂತನ ಗೋವು ತಳಿಗಳ ಪ್ರದರ್ಶನ ಹಾಗೂ ಫೆಬ್ರವರಿ 26 ರಂದು ಬೆಳಿಗ್ಗೆ 10 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಸ್ಟೇಡಿಯಂದಲ್ಲಿ ಶ್ವಾನಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಆಸಕ್ತರು ಪ್ರದರ್ಶನದಲ್ಲಿ ಮಳಿಗೆಗಾಗಿ ಮೊಬೈಲ್ ಸಂಖ್ಯೆ 8453381700, 8217333171, 9880626689 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.