ಫೆ.17 ರಂದು ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ

ಫೆ.17 ರಂದು ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು : 2023-24 ನೇ ಸಾಲಿನ ಆರ್ಥಿಕ ಸಾಲಿನ ಅಯವ್ಯಯವನ್ನು ಫೆ. 17 ರ ಬೆಳಗ್ಗೆ 10.15 ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮಂಡನೆ ಮಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಸದನ ಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರವನ್ನು ಪ್ರಕಟಿಸಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಫೆ. 16 ರಂದು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಸಿಎಂ ಬೊಮ್ಮಾಯಿ ಉತ್ತರ ನೀಡಲಿದ್ದಾರೆ ಎಂದರು.

ಫೆ. 17 ರ ಬೆಳಗ್ಗೆ 10.15 ಕ್ಕೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಫೆ. 20, 21, 22 ರಂದು ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಫೆ.23 ರಂದು ಸಿಎಂ ಬೊಮ್ಮಾಯಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.