ಫೆ.17ರಂದು ರಾಜ್ಯ ಬಜೆಟ್ ಮಂಡನೆ; ಜ. 23ರಿಂದ ಸಿಎಂ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಫೆ.17ರಂದು ರಾಜ್ಯ ಬಜೆಟ್ ಮಂಡನೆ; ಜ. 23ರಿಂದ ಸಿಎಂ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಭರ್ಜರಿ ತಯಾರು ನಡೆಯುತ್ತಿದೆ.

ಈ ಮಧ್ಯೆಯೇ 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಗೂ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಜನವರಿ 23ರಿಂದ ಸಿಎಂ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ ನಡೆಯಲಿದೆ.ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಜ.23, 24 & 25ರಂದು 3 ದಿನ ಬಜೆಟ್ ಪೂರ್ವಭಾವಿ ಸಭೆ ನಿಗದಿಯಾಗಿದ್ದು 30ಕ್ಕೂ ಹೆಚ್ಚು ಇಲಾಖೆಗಳ ಜೊತೆ ಚರ್ಚಿಸಿ ಫೆ.17ರಂದು ಬಜೆಟ್ ಮಂಡಿಸಲು ಸಿಎಂ ಬೊಮ್ಮಾಯಿ ಸಿದ್ಧತೆ ನಡೆಸಿದ್ದಾರೆ.ಇನ್ನು ಬಜೆಟ್​ ಪೂರ್ವಭಾವಿ ಸಭೆಯ ನಿತ್ಯ ಬೆಳಗ್ಗೆ 10.30ರಿಂದ ಸಂಜೆ 6 ಗಂಟೆವರೆಗೂ ನಡೆಯಲಿವೆ.