ಫೆ.27ರಂದು ಶಿವಮೊಗ್ಗಕ್ಕೆ 'ಪ್ರಧಾನಿ ಮೋದಿ' ಭೇಟಿ : 'ವಿಮಾನ ನಿಲ್ದಾಣ' ಉದ್ಘಾಟನೆ

ಫೆ.27ರಂದು ಶಿವಮೊಗ್ಗಕ್ಕೆ 'ಪ್ರಧಾನಿ ಮೋದಿ' ಭೇಟಿ : 'ವಿಮಾನ ನಿಲ್ದಾಣ' ಉದ್ಘಾಟನೆ

ಶಿವಮೊಗ್ಗ : ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ 27ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಪ್ರಧಾನಿ ಅವರು ಜಿಲ್ಲೆಯ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಸಿರಿಧಾನ್ಯ ಮೇಳದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಅವರ ಭೇಟಿ ಸಂದರ್ಭದಲ್ಲಿ ಸೂಕ್ತ ಟ್ರಾಫಿಕ್ ವ್ಯವಸ್ಥೆ, ಬೆಂಗಾವಲು ವಾಹನಗಳು, ಸುರಕ್ಷತಾ ಕ್ರಮಗಳು, ವೇದಿಕೆ, ಗ್ರೀನ್ ರೂಂ, ಅತಿಥಿ ಗಣ್ಯರಿಗೆ ವಾಸ್ತವ್ಯ ಮತ್ತು ಆತಿಥ್ಯ ವ್ಯವಸ್ಥೆ, ಇಂಟರ್ನೆಟ್ ಸಂಪರ್ಕ, ಸಿಸಿಟಿವಿ ಅಳವಡಿಕೆ, ನಿರಂತರ ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿಯೊಂದು ಕಾರ್ಯದ ಮೇಲುಸ್ತುವಾರಿಗೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು ಎಂದರು.

ಸ್ಥಳೀಯವಾಗಿ ಅಂಬ್ಯುಲೆನ್ಸ್, ಅಗ್ನಿಶಾಮಕ ದಳದ ವಾಹನ ವ್ಯವಸ್ಥೆಯನ್ನು ಮಾಡಬೇಕು. ಪೊಲೀಸ್ ಬ್ಯಾಂಡ್ ವತಿಯಿಂದ ರಾಷ್ಟçಗೀತೆ ನುಡಿಸಲಾಗುವುದು. ಆಹಾರದ ಸುರಕ್ಷತೆ, ಬೆಂಕಿ ಸುರಕ್ಷತೆ ಮತ್ತು ವಿದ್ಯುತ್ ಸುರಕ್ಷತೆಯನ್ನು ಸಂಬAಧಪಟ್ಟ ಇಲಾಖಾಧಿಕಾರಿಗಳು ಪ್ರಮಾಣೀಕರಿಸಬೇಕು. ಅತಿಥಿಗಳಿಗೆ ಸೂಕ್ತ ವಾಸ್ತವ್ಯಕ್ಕಾಗಿ ಎಲ್ಲಾ ಸರ್ಕಾರಿ ಅತಿಥಿ ಗೃಹಗಳು ಮತ್ತು ನಗರದ ಲಾಡ್ಜ್ಗಳನ್ನು ಕಾಯ್ದಿರಿಸಬೇಕು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ, ವೇದಿಕೆ ಹಾಗೂ ಮುಂಭಾಗದಲ್ಲಿ ಆಸನ ವ್ಯವಸ್ಥೆ, ಪ್ರವೇಶ ದ್ವಾರ, ಶೌಚಾಲಯಗಳು ಸೇರಿದಂತೆ ಪ್ರತಿಯೊಂದು ಅಂಶಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಅಧಿಕಾರಿಗಳು ತಮಗೆ ನೀಡಲಾಗುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಡಿ.ಪ್ರಕಾಶ್, ಮುಖ್ಯಮಂತ್ರಿ ಅವರ ವಿಶೇಷಾಧಿಕಾರಿ ರಾಜಪ್ಪ, ಎಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಪಿಡಬ್ಲುಡಿ ಚೀಫ್ ಇಂಜಿನಿಯರ್ ಕಾಂತರಾಜು, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.