ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ : ಫೆ. 6 ರಂದು ಬೆಂಗಳೂರು, ತುಮಕೂರಿನ ಸಮಾವೇಶದಲ್ಲಿ ಭಾಗಿ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ಬೆಂಗಳೂರು ಮತ್ತು ತುಮಕೂರಿಗೆ ಭೇಟಿ ನೀಡಲಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಕರ್ನಾಟಕಕ್ಕೆ ಇದು ಅವರ ಮೂರನೇ ಭೇಟಿಯಾಗಿದೆ.
ಫೆಬ್ರವರಿ 6 ರಂದು ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಮೋದಿ ಅವರು ಇಂಡಿಯಾ ಎನರ್ಜಿ ವೀಕ್ ಅನ್ನು ಉದ್ಘಾಟಿಸಲಿದ್ದಾರೆ.