ಫೆಬ್ರವರಿ ತಿಂಗಳಿನಲ್ಲಿ ರಾಜ್ಯ ಸರ್ಕಾರದಿಂದ 'ದಾಸೋಹ ದಿನ' ಆಚರಣೆ : ಸಿಎಂ ಬೊಮ್ಮಾಯಿ

ತುಮಕೂರು : ಫೆಬ್ರವರಿ ತಿಂಗಳಿನಲ್ಲಿ ರಾಜ್ಯ ಸರ್ಕಾರದಿಂದ 'ದಾಸೋಹ ದಿನ' ಆಚರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಫೆಬ್ರವರಿ ತಿಂಗಳಿನಲ್ಲಿ ಸರ್ಕಾರದಿಂದ ದಾಸೋಹ ದಿನ ಆಚರಣೆ ಮಾಡಿ ಶ್ರೀಗಳಿಗೆ ಗೌರವ ಸಲ್ಲಿಸಲಾಗುತ್ತದೆ. ಮಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಬರುತ್ತೇವೆ, ಸಿಎಂ ನೇತೃತ್ವದಲ್ಲಿ ಚುನಾವಣೆ ಎಂದು ಅಮಿತ್ ಶಾ ಹೇಳಿದ್ದಾರೆ. ಸಿಎಂ ನೇತೃತ್ವದಲ್ಲಿ ಮಾತ್ರವಲ್ಲ, ಎಲ್ಲರೂ ಸೇರಿ ಚುನಾವಣೆಗೆ ಹೋಗುತ್ತೇವೆ, ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.