ಫೆಬ್ರವರಿ ಮೊದಲ ವಾರದಲ್ಲಿ ದಾವಣಗೆರೆಗೆ ಪ್ರಧಾನಿ ಮೋದಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ

ದಾವಣಗೆರೆ : ಕಳೆದ ಎರಡು ದಿನಗಳ ಹಿಂದೆ ಕಲಬುರಗಿ, ಯಾದಗಿರಿ ಜಿಲ್ಲೆಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಫೆಬ್ರವರಿ ಮೊದಲ ವಾರದಲ್ಲಿ ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಬರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಬಿಜೆಪಿಯಿಂದ ಬೃಹತ್ ಸಮಾವೇಶ ಮಾಡುತ್ತೇವೆ.ಈ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದೆ. ರಾಜಸ್ಥಾನ ಸೇರಿ ವಿವಿಧ ರಾಜ್ಯಗಳಲ್ಲಿ ನೀಡಿದ ಆಶ್ವಾಸನೆ ಏನಾಗಿದೆ.ರಾಜಸ್ಥಾನದಲ್ಲಿ ಆಡಳಿತವಿರುವ ಕಾಂಗ್ರೆಸ್ ಯಾವ ಆಶ್ವಾಸನೆ ಈಡೇರಿಸಿದೆ. ಕಾಂಗ್ರೆಸ್ ಅಂದರೆ ಬರೀ ಸುಳ್ಳು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.