ಫೆಬ್ರವರಿಯಲ್ಲಿ ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಭೇಟಿ: ಸಚಿವ ಸುಧಾಕರ್

ಫೆಬ್ರವರಿಯಲ್ಲಿ ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಭೇಟಿ: ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ನಾನಾ ಕಸರತ್ತು ಮಾಡುತ್ತಿದ್ದಾರೆ.

ಫೆಬ್ರವರಿಯಲ್ಲಿ ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೆರೇಸಂದ್ರ ಗ್ರಾಮದಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ಉದ್ಘಾಟನೆಗೆ ಮೋದಿ ಆಗಮಿಸಲಿದ್ದಾರೆ.

ಮೋದಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಬೇಕು ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.
ಇತ್ತ, ಫೆಬ್ರುವರಿ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ‌ ದಾವಣಗೆರೆಗೆ ಬರಲಿದ್ದಾರೆ. ದೊಡ್ಡ ಸಮಾವೇಶ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.