ಫೆಬ್ರವರಿಯಲ್ಲಿ ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ : ಈ ನಾಲ್ಕು ಜಿಲ್ಲೆಗಳ ಬೃಹತ್ ಸಮಾವೇಶಗಳಲ್ಲಿ ಭಾಗಿ

ಬೆಂಗಳೂರು : ಕರ್ನಾಟಕದಲ್ಲಿ ಮತದಾರರನ್ನು ಸೆಳೆಯುತ್ತಿರುವ ಬಿಜೆಪಿ ಈಗಾಗಲೇ ರಾಜ್ಯದ ಹಲವು ಕಡೆ ಭರ್ಜರಿ ಸಮಾವೇಶ, ಪ್ರಚಾರ ನಡೆಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಫೆ.6 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಧಾರವಾಡ, ತುಮಕೂರು ಜಿಲ್ಲೆಗೆ ಭೇಟಿ ನೀಡಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ಬಳಿಕ ಚಿಕ್ಕಬಳ್ಳಾಪುರ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೆರೇಸಂದ್ರ ಗ್ರಾಮದಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ಉದ್ಘಾಟನೆಗೆ ಮೋದಿ ಆಗಮಿಸಲಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಬೇಕು ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.
ಇತ್ತ, ಫೆಬ್ರುವರಿ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ದಾವಣಗೆರೆಗೆ ಬರಲಿದ್ದಾರೆ. ದೊಡ್ಡ ಸಮಾವೇಶ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.