ಫೆಬ್ರವರಿಯಲ್ಲೇ ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಸಿದ್ದತೆ

ಬೆಂಗಳೂರು: ರಾಜ್ಯ ಸರಕಾರ ಈ ಬಾರಿ ತನ್ನ ಬಜೆಟ್ ನ್ನು ಫೆಬ್ರವರಿ ತಿಂಗಳಲ್ಲೇ ಮಂಡನೆ ಮಾಡುವುದಕ್ಕೆ ನಿರ್ಧರಿಸಿದ್ದು, ಇದಕ್ಕೆ ಸಂಬಂಧಪಟ್ಟಂತೆ ಸಿದ್ಧತೆಗಳನ್ನು ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಡಿಸೆಂಬರ್ ತಿಂಗಳಲ್ಲಿ ನಡೆಯುವ ವಿಧಾನ ಮಂಡಲದ ಜಂಟಿ ಅಧಿವೇಶನದ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ಸಿದ್ಧತೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ.ಬಸವರಾಜ್ ಬೊಮ್ಮಾಯಿ ಅವರಿಗೆ ಇದು ಈ ಅವಧಿಯ ಕೊನೆಯ ಬಜೆಟ್. ಜತೆಗೆ ಚುನಾವಣಾ ವರ್ಷವಾಗಿದೆ. ಹೀಗಾಗಿ ಜನಪ್ರಿಯ ಘೋಷಣೆಗಳಿಗೆ ಹೆಚ್ಚು ಒತ್ತು ನೀಡಲು ನಿರ್ಧರಿಸಲಾಗಿದೆ. ಜನಸಾಮಾನ್ಯರಿಗೆ ಹತ್ತಿರವಾಗುವ ಘೋಷಣೆಗಳು ಹೆಚ್ಚಿರಲಿವೆ.