ಫ್ರೀಡಂಪಾರ್ಕ್‌ನಲ್ಲಿ ಅಂಗನವಾಡಿ ನೌಕರರಿಂದ ಪ್ರತಿಭಟನೆಗೆ ಕರೆ

ಫ್ರೀಡಂಪಾರ್ಕ್‌ನಲ್ಲಿ ಅಂಗನವಾಡಿ ನೌಕರರಿಂದ ಪ್ರತಿಭಟನೆಗೆ ಕರೆ

ಅಂಗನವಾಡಿಗೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿಲ್ಲ ಎಂದು ಹೇಳಲಾಗಿದೆ. ಇದೇ ವಿಷಯಕ್ಕೆ ಕಾರ್ಯಕರ್ತೆಯರು ಕೋಪಗೊಂಡಿದ್ದಾರೆ. ಜನವರಿ 18ರಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿಯ ಫ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಂಗನವಾಡಿಗೂ ವಿಸ್ತರಿಸಬೇಕು ಅನ್ನೋ ಕೂಗೆದ್ದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಕಾರ್ಯಕರ್ತೆಯರು, ಸಹಾಯಕಿಯರು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.