ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ 2 ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ 2 ದಿನ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಇನ್ನೂ ಎರಡು ದಿನ ಸಾಧಾರಣ ಮಳೆ ಆಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಮುಂಗಾರಿನ ಕೆಲವು ಬೆಳೆಗಳ ಕೊಯ್ಲು ನಡೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ಮಳೆ, ಮೋಡ ಕವಿದ ವಾತಾವರಣದಿಂದ ರೈತಾಪಿ ವರ್ಗಕ್ಕೆ ತೊಂದರೆಯಾಗಿದೆ ಎನ್ನಲಾಗಿದೆ.