ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಬಜೆಟ್ ನಲ್ಲಿ `ಉಚಿತ ನೀರು' ನೀಡುವ ಯೋಜನೆ ಘೋಷಣೆ ಸಾಧ್ಯತೆ
ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಏಪ್ರಿಲ್,ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬಾರಿ ಸಿಎಂ ಬೊಮ್ಮಾಯಿ ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಮಾದರಿಯಲ್ಲಿ ರಾಜ್ಯದಾದ್ಯಂತ ಎಲ್ಲಾ ಪೌರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ರಾಜ್ಯ ಬಜೆಟ್ ನಲ್ಲಿ ರಾಜ್ಯದ 55 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ, ಮೊದಲ ಹಂತದಲ್ಲಿ 155 ಪೌರ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯದ ಪಟ್ಟಣ, ನಗರವಾಸಿಗಳ ಮನೆಗಳಿಗೆ ಮಾಸಿಕ 10,000 ಲೀಟರ್ ಮಿತಿಗೆ ಒಳಪಟ್ಟು ಉಚಿತವಾಗಿ ನೀರು ಪೂರೈಕೆ ಯೋಜನೆ ಜಾರಿಗೊಳಿಸುವ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.