ಬಜೆಟ್‌ ಬಳಿಕ ರಾಜೀನಾಮೆ: ಗುಬ್ಬಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌

ಬಜೆಟ್‌ ಬಳಿಕ ರಾಜೀನಾಮೆ: ಗುಬ್ಬಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌

ಗುಬ್ಬಿ (ತುಮಕೂರು): ರಾಜ್ಯ ಬಜೆಟ್‌ ಅಧಿವೇಶನದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಗುಬ್ಬಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಪ್ರಕಟಿಸಿದ್ದಾರೆ.

'ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದೆ ಬೇರೆ ಪಕ್ಷ ಸೇರಲು ಸಾಧ್ಯವಿಲ್ಲ.

ಬಜೆಟ್‌ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಕ್ಷೇತ್ರದ ಕಾರ್ಯಕರ್ತರು ಹಾಗೂ ಹಿತೈಷಿಗಳ ಸಲಹೆಯಂತೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ' ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.