ಬಡವರ ಊಟಕ್ಕೆ ಕಲ್ಲು ಹಾಕ್ತಾ ಬೊಮ್ಮಾಯಿ ಸರ್ಕಾರ?: 40 ಇಂದಿರಾ ಕ್ಯಾಂಟೀನ್ ಕ್ಲೋಸ್

ಬೆಂಗಳೂರು: ಬಡವರಿಗಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಎಳ್ಳು ನೀರು ಬಿಟ್ಟಿದೆ. ಬೆಂಗಳೂರಿನ 40 ಇಂದಿರಾ ಕ್ಯಾಂಟೀನ್ಗಳನ್ನು ಮುಚ್ಚಲಾಗಿದೆ.
ಹಾಗೂ ಕೆಲವೇ ಬಿಜೆಪಿ ಶಾಸಕರ ಸೂಚನೆ ಮೇರೆಗೆ ಕ್ಯಾಂಟೀನ್ಗಳನ್ನು ಮುಚ್ಚಲಾಗುತ್ತಿದೆ. ಪಾರ್ವತಿಪುರ, ಸಂಪಿಗೆ ರಾಮನಗರ, ಬಿಸ್ಮಿಲ್ಲಾನಗರದ ಟ್ಯಾಂಕ್‌ಬಂಡ್ ರಸ್ತೆ, ಹೊಸಹಳ್ಳಿ, ಪುಲಿಕೇಶಿ ನಗರ, ಎಚ್‌ಎಸ್‌ಆರ್ ಲೇಔಟ್‌ನ ಸೋಮಸುಂದರ ಪಾಳ್ಯ, ಸುಬ್ರಮಣ್ಯಪುರಂನ ವಸಂತನಗರ, ಮಹದೇವಪುರದ ಎ. ನಾರಾಯಣಪುರ,
ಕೋಗಿಲು, ಪ್ರಕೃತಿನಗರ ಸೇರಿದಂತೆ 40 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ಗಳನ್ನು ಮುಚ್ಚಲಾಗಿದೆ. ನಗರದ 198 ವಾರ್ಡ್‌ಗಳಲ್ಲೂ ತಲಾ ಒಂದು ಇಂದಿರಾ ಕ್ಯಾಂಟೀನ್ ತೆರೆಯಲು ಯೋಜನೆ ರೂಪಿಸಲಾಗಿತ್ತು. ಇಂದಿರಾ ಕ್ಯಾಂಟೀನ್ ಗ್ರಾಹಕರ ಸಂಖ್ಯೆ ಶೇ.60ರಷ್ಟು ಕುಸಿದಿದೆ ಎನ್ನಲಾಗಿದೆ. ಮೊದಲು ದಿನ ನಿತ್ಯ 3.5 ಲಕ್ಷ ಮಂದಿ ಪ್ರತಿದಿನ ಕ್ಯಾಂಟೀನ್ ಗೆ ಬರುತ್ತಿದ್ದರು. ಇದೀಗ ಅದರ ಸಂಖ್ಯೆ 1.5 ಲಕ್ಷಕ್ಕೆ ಇಳಿಕೆಯಾಗಿದೆ.