ಬಡ್ತಿ' ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್

ಬಡ್ತಿ' ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್

ಬೆಂಗಳೂರು : ಬಡ್ತಿ ನಿರೀಕ್ಷೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಸಿಹಿಸುದ್ದಿ, ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಬಡ್ತಿ ಪಡೆಯಲು ಅರ್ಹತೆ ಇರುವ ಎಲ್ಲ ಶಿಕ್ಷಕರಿಗೂ ವರ್ಗಾವಣೆ ಪ್ರಕ್ರಿಯೆ ಮುಗಿದಬಳಿಕ ಬಡ್ತಿ ನೀಡಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಬಡ್ತಿ ನೀಡುವ ಕುರಿತಂತೆ ಮಾಹಿತಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಆರ್. ವಿಶಾಲ್ ಮಾಹಿತಿ ನೀಡಿದ್ದು,ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಬಡ್ತಿ ಪಡೆಯಲು ಅರ್ಹತೆ ಇರುವ ಎಲ್ಲ ಶಿಕ್ಷಕರಿಗೂ ವರ್ಗಾವಣೆ ಪ್ರಕ್ರಿಯೆ ಮುಗಿದಬಳಿಕ ಬಡ್ತಿ ನೀಡಲಾಗುತ್ತದೆ, ಮಾ.9 ರಿಂದ ಮಾ.31ರೊಳಗೆ ಬಡ್ತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಸಹ ಶಿಕ್ಷಕರಿಂದ ಮುಖ್ಯ ಶಿಕ್ಷಕರಿಗೆ, ಮುಖ್ಯ ಶಿಕ್ಷಕರಿಂದ ಹಿರಿಯ ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡಲು ನಿರ್ಧರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ವರ್ಗಾವಣಿ ಮುಗಿದ ಬಳಿಕ ಬಡ್ತಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.