
ಹುಬ್ಬಳ್ಳಿ: ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯನ್ನು ನಿರೀಕ್ಷಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಭಾನುವಾರ ಹುಬ್ಭಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ 2 ವರ್ಷಗಳ ನಂತರ ಅಧಿವೇಶನ ನಡೆಯಲಿದ್ದು, ಇದಕ್ಕಾಗಿ ಸರ್ಕಾರ ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ.
ಅಧಿವೇಶನದಲ್ಲಿ ಅಭಿವೃದ್ಧಿಯ ಪರವಾದ ಹಾಗೂ ಜನರಿಗೆ ಉಪಯುಕ್ತವಾಗುವ ಚರ್ಚೆಯಾಗಬೇಕೆಂದು ಬಯಸುವುದಾಗಿ ತಿಳಿಸಿದರು. ಮಹತ್ವದ ಹಾಗೂ ಅರ್ಥಪೂರ್ಣ ಚರ್ಚೆಗಳಾಗಬೇಕೆನ್ನುವುದು ಉತ್ತರ ಕರ್ನಾಟಕ ಭಾಗದ ಜನರ ಅಪೇಕ್ಷೆಯೂ ಹೌದು. ಸರ್ಕಾರವು ಸಮಗ್ರ ಕರ್ನಾಟಕ ಅದರಲ್ಲಿಯೂ ವಿಶೇಷವಾಗಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಗೆ ಸಂಬಂಧಿಸಿದ ಚರ್ಚೆಗಳನ್ನು ಸ್ವಾಗತಿಸುತ್ತೇವೆ. ಕೆಲವು ವಿಚಾರಗಳಲ್ಲಿ ನಿರ್ಧಾರಕ್ಕೆ ಬರಬೇಕೆನ್ನುವ ಉದ್ದೇಶವಿದೆ ಎಂದು ತಿಳಿಸಿದರು.
ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ ಜಟಾಪಟಿ ಸಾಧ್ಯತೆಬೆಂಗಳೂರು : ಮತಾಂತರ ನಿಷೇಧ ವಿಧೇಯಕ ಚಳಿಗಾಲ ಅಧಿವೇಶನದಲ್ಲಿ ವಿಧಾನಸಭೆ ಕಲಾಪದಲ್ಲಿ ಮಹತ್ವ ಪಡೆಯುತ್ತಿದೆ. ವಿಧೇಯಕ ವಿರೋಧಿಸುವುದಕ್ಕೆ ಕಾಂಗ್ರೆಸ್ ಮುಂದಾಗಿದೆ. ಆದರೆ ಸರಕಾರ ಪ್ರತಿಪಕ್ಷವಾಗಿ ವಿರೋಧಿಸುವುದು ಸಹಜ ಎಂಬ ಹೇಳಿಕೆ ನೀಡಿದೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ,‘‘ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಅಗತ್ಯವಿರುವ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕಾಂಗ್ರೆಸ್ ಪ್ರತಿಪಕ್ಷವಾಗಿರುವುದರಿಂದ ನಾನಾ ವಿಚಾರಗಳ ಬಗ್ಗೆ ಪ್ರತಿಭಟನೆ ಮಾಡಬಹುದು. ಪ್ರತಿರೋಧ ಮಾಡುವುದು ಸಹಜ,’’ ಎಂದು ಉದ್ದೇಶಿತ ಮತಾಂತರ ನಿಷೇಧ ವಿಧೇಯಕದ ಬಗ್ಗೆ ಕಾಂಗ್ರೆಸ್ ಪ್ರತಿರೋಧಕ್ಕೆ ಉತ್ತರಿಸಿದರು.‘‘ವಾರಣಾಸಿಯಲ್ಲಿ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದ್ದು, ಡಿ. 13ರ ಸಂಜೆ ಹೊರಟು ಡಿ. 14ರ ಸಂಜೆ ವಾಪಸಾಗಲಿದ್ದೇನೆ,’’ಎಂದರು.
ಹೂಡಿಕೆ ಮೇಲೆ ಪ್ರತಿಕೂಲ ಎಂದ ಡಿಕೆಶಿ!
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ‘‘ ಮತಾಂತರ ನಿಷೇಧ ಸಂಬಂಧ ವಿಧೇಯಕ ಸಂಬಂಧ ಸರಕಾರ ಎರಡು ಯೋಜನೆ ರೂಪಿಸಿದೆ. ಒಂದು ಸರಕಾರವೇ ಮಂಡಿಸುವುದು. ಮತ್ತೊಂದು ಖಾಸಗಿಯಾಗಿ ತರುವುದು. ಇದು ಕೇವಲ ರಾಜ್ಯದ ವಿಚಾರವಾಗಿರದೆ ಇಡೀ ವಿಶ್ವವೇ ಗಮನಿಸುವ ವಿಚಾರವಾಗಿದೆ. ಇದು ಬಂಡವಾಳ ಹೂಡಿಕೆ ಸೇರಿದಂತೆ ಹಲವು ವಿಚಾರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ,’’ ಎಂದು ತಿಳಿಸಿದರು.
‘‘ಸದ್ಯ ಜಾರಿಯಲ್ಲಿರುವ ಕಾನೂನಿನಲ್ಲಿಯಾರೂ ಒತ್ತಡ ಹೇರುತ್ತಿಲ್ಲ. ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿಒಂದೊಂದೇ ಸಮುದಾಯವನ್ನು ಬಿಜೆಪಿ ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿಕ್ರೈಸ್ತ ಸಮುದಾಯದ ಕೊಡುಗೆ ಮರೆಯಲಾಗದು. ಕ್ರೈಸ್ತ ಶಿಕ್ಷಣ ಸಂಸ್ಥೆಗಳಲ್ಲಿಓದಿದ ಯಾರೇ ಒಬ್ಬ ವಿದ್ಯಾರ್ಥಿ ತಮ್ಮನ್ನು ಮತಾಂತರಕ್ಕೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿರುವ ಒಂದಾದರೂ ದೂರು ದಾಖಲಾಗಿದೆಯೇ? ಆಸ್ಪತ್ರೆಗಳಲ್ಲಿರೋಗಿಗಳಿಗೆ ಒತ್ತಾಯ ಮಾಡಿದ್ದಾರೆಯೇ? ಅವರು ಮಾನವೀಯತೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ,’’ ಎಂದು ಹೇಳಿದರು.