ಬಳ್ಳಾರಿ ನಗರದ ಈ ಪ್ರದೇಶಗಳಲ್ಲಿ ಫೆ.23, 24ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ : ಬಳ್ಳಾರಿ ನಗರದ ಈ ಪ್ರದೇಶಗಳಲ್ಲಿ ಫೆ.23, 24ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ಸಹಾಯಕ ಇಂಜಿನಿಯರ್ ಪ್ರಕಟಣೆ ತಿಳಿಸಿದ್ದಾರೆ.
ಬಳ್ಳಾರಿ ನಗರ ಜೆಸ್ಕಾಂ ವ್ಯಾಪ್ತಿಯಲ್ಲಿ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರ ಉಪವಿಭಾಗ-1ರಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಫೆ.23 ಮತ್ತು 24ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಎಫ್-24, ಎಫ್-25 ಫೀಡರ್ನ ಬೆಂಗಳೂರು ರಸ್ತೆ, ಕಾರ್ಕಲ ತೋಟ, ಬಾಪೂಜಿ ನಗರ, ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂನ ಸಹಾಯಕ ಇಂಜಿನಿಯರ್ ಅವರು ತಿಳಿಸಿದ್ದಾರೆ.