ಬಳ್ಳಾರಿಯಲ್ಲಿ ರಾಜ್ಯದಲ್ಲಿಯೇ ಅತೀ ಎತ್ತರದ `ಡಾ.ಪುನೀತ್ ರಾಜಕುಮಾರ್' ಪುತ್ಥಳಿ ಅನಾವಣ!

ಬಳ್ಳಾರಿಯಲ್ಲಿ ರಾಜ್ಯದಲ್ಲಿಯೇ ಅತೀ ಎತ್ತರದ `ಡಾ.ಪುನೀತ್ ರಾಜಕುಮಾರ್' ಪುತ್ಥಳಿ ಅನಾವಣ!

ಳ್ಳಾರಿ : ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದ ನಲ್ಲಚೇರುವು ಕೆರೆಯ ಪಕ್ಕದಲ್ಲಿ ನಿರ್ಮಿಸಿದ್ದ 23 ಅಡಿಯ ಡಾ.ಪುನೀತ್ ರಾಜಕುಮಾರ್ ಅವರ ಪುತ್ಥಳಿಗೆ ರಾಜ್ ಕುಮಾರ್ ಕುಟುಂಬ ಮತ್ತು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಎಂ.ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಸಹಾಯಕ ಆಯುಕ್ತ ಹೇಮಂತ್, ಎಡಿಸಿ ಮಂಜುನಾಥ, ಪಾಲಿಕೆ ಆಯುಕ್ತ ಜಿ.ರುದ್ರೇಶ್ ಸೇರಿದಂತೆ ಇತರರು ಇದ್ದರು.