ಜ. 13ರಂದು ಸಿಎಂ ಬೊಮ್ಮಾಯಿ ನಿವಾಸದ ಬಳಿ ಧರಣಿ : ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಜ. 13ರಂದು ಸಿಎಂ ಬೊಮ್ಮಾಯಿ ನಿವಾಸದ ಬಳಿ ಧರಣಿ : ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಬಾಗಲಕೋಟೆ: ಸಿಎಂ ಬಸವರಾಜ ಬೊಮ್ಮಾಯಿ ಕೊಟ್ಟ ಮಾತು ತಪ್ಪಿದ್ದಾರೆ. 2ಎ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಖಡಕ್​ ಆಗಿ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.12ರೊಳಗೆ 2ಎ ಮೀಸಲಾತಿ ಘೋಷಿಸಿ ನೋಟಿಫಿಕೇಷನ್ ಹೊರಡಿಸಬೇಕು.

ಇಲ್ಲದಿದ್ದರೆ ಜ. 13ರಂದು ಶಿಗ್ಗಾಂವಿಯಲ್ಲಿರುವ ಸಿಎಂ ಬೊಮ್ಮಾಯಿ ನಿವಾಸದ ಬಳಿ ಧರಣಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಜೊತೆಗೆ ರಾಜ್ಯದ ಪಂಚಮಸಾಲಿ‌ ಸಮಾಜದ ಬಾಂಧವರು ರೊಟ್ಟಿ ಬುತ್ತಿ ಕಟ್ಟಿಕೊಂಡು ಬಂದು ಧರಣಿಯಲ್ಲಿ ಭಾಗವಹಿಸುವಂತೆ ಸ್ವಾಮೀಜಿ ಕರೆ ನೀಡಿದರು.ಕಳೆದ 1 ವಾರದಿಂದ ಮೀಸಲಾತಿ ಹೋರಾಟ ಮುಚ್ಚಿ ಹಾಕಲು ಯತ್ನಿಸಲಾಗುತ್ತಿದೆ. ಕೆಲವು ಕುತಂತ್ರಿಗಳು, ದುಷ್ಟಶಕ್ತಿಗಳು ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದಾರೆ. ಬ್ರಿಟಿಷರ ಪಾಲಿಸಿ ಮೂಲಕ ಹೋರಾಟ ಕುಂದಿಸುವ ಕೆಲಸ ಮಾಡ್ತಿದ್ದಾರೆ ಎಂದರು.