ವಿಧಾನಸೌಧದ ಎದುರು ಬಸವಣ್ಣ, ಕೆಂಪೇಗೌಡ ಪುತ್ಥಳಿಗಿಂದು ಸಿಎಂ ಶಂಕುಸ್ಥಾಪನೆ
ವಿಧಾನಸೌಧದ ಮುಂಭಾಗ ಇಂದು ಜಗಜ್ಯೋತಿ ಬಸವಣ್ಣ & ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ವಿಧಾನಸೌಧದ ಮುಂಭಾಗ 24 ಅಡಿ ಎತ್ತರದ ಬಸವಣ್ಣ & ಕೆಂಪೇಗೌಡ ಪುತ್ಥಳಿಗಳನ್ನು 8 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ. ಈ ಸಂಬಂಧ ಗುರುವಾರ ಕಂದಾಯ ಸಚಿವ ಆರ್. ಅಶೋಕ್ ಸ್ಥಳಪರಿಶೀಲನೆ ನಡೆಸಿದ್ದರು. ವಿಧಾನಸೌಧದ ಮುಂಭಾಗದಲ್ಲಿ ಈಗಾಗಲೇ ಅಂಬೇಡ್ಕರ್ & ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಪ್ರತಿಮೆಗಳಿವೆ.