ಬಸವನಗುಡಿಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್​ ರಾಜ್​ಕುಮಾರ್

ಬಸವನಗುಡಿಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್​ ರಾಜ್​ಕುಮಾರ್

ಇಂದು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪುನೀತ್ ರಾಜ್​ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಇತ್ತೀಚೆಗೆ ರಿಲೀಸ್ ಆಯಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಲು ಆಗಿರಲಿಲ್ಲ. ಈ ಕಾರಣಕ್ಕೆ ಇಂದು ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದಿದ್ದಾರೆ. ಇದರ ಜೊತೆಗೆ ಅಭಿಮಾನಿಗಳು ಮಾಡಿಸಿದ್ದ ಕ್ಯಾಲೆಂಡರ್ ಕೂಡ ರಿಲೀಸ್ ಮಾಡಿದ್ದಾರೆ ಅಶ್ವಿನಿ ರಾಜ್​ಕುಮಾರ್ .