ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ : ಪೊಲೀಸರಿಂದ 216 ಪುಟಗಳ ಜಾರ್ಜ್ ಶೀಟ್ ಸಲ್ಲಿಕೆ

ರಾಮನಗರ: ನಗರದ ಕುಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಂಪೂರ್ಣಗೊಳಿಸಿದ್ದಾರೆ.
ಇದೀಗ ಮಾಗಡಿ ಕೋರ್ಟ್ ಗೆ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಅಕ್ಟೋಬರ್ 24 ರಂದು ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಇದರಲ್ಲಿ ಅವರ ಆತ್ಮಹತ್ಯೆಗೆ ಯುವತಿ ಕೈವಾಡ ಸಹ ಇತ್ತು.ಇನ್ನು ಸ್ವಾಮೀಜಿ ಉಲ್ಲೇಖಿಸಿದ್ದ ಯುವತಿ ನೀಲಾಂಬಿಕೆ ಆಗಿದ್ದು, ಆಕೆ ಈಗಾಗಲೇ ತಪ್ಪೊಪ್ಪಿಕೊಂಡಿದ್ದಾಳೆ. ಈ ಪ್ರಕರಣದ ಪ್ರಮುಖ ಆರೋಪಿಗಳು ಜೈಲಿನಲ್ಲಿದ್ದಾರೆ.ಪ್ರಕರಣ ಸಂಬಂಧ ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾಗಡಿ ಠಾಣೆ ಇನ್ಸ್ ಪೆಕ್ಟರ್ ಇಂದು ಕೋರ್ಟ್ ಗೆ ಜಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.