ಬಾಗಲಕೋಟೆಯಲ್ಲಿ ದಾರುಣ ಘಟನೆ : ಪ್ರಿಯತಮೆಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಬಾಗಲಕೋಟೆ : ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಕೂಡ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗುಡೂರು ಗ್ರಾಮದಲ್ಲಿ ನಡೆದಿದೆ.
ನೇತ್ರಾವತಿ (21) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ನೇತ್ರಾವತಿಯನ್ನು ಬಹಳ ವರ್ಷಗಳಿಂದ ಅಫ್ಜಲ್ ಪ್ರೀತಿಸುತ್ತಿದ್ದನು ಎಂದು ತಿಳಿದು ಬಂದಿದೆ. ಪ್ರಿಯತಮೆಗೆ ಬೇರೆ ವ್ಯಕ್ತಿಯ ಜೊತೆ ನಿಶ್ಚಿತಾರ್ಥ ಆಗಿದೆ ಎಂದು ರೊಚ್ಚಿಗೆದ್ದ ಅಫ್ಜಲ್ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಅಮೀನಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.