ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಗೆಲ್ಲುವ ವಿಶ್ವಾಸವಿಲ್ಲ; ಸಿದ್ದರಾಮಯ್ಯ ವಿರುದ್ಧ BSY ವಾಗ್ದಾಳಿ

ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಗೆಲ್ಲುವ ವಿಶ್ವಾಸವಿಲ್ಲ; ಸಿದ್ದರಾಮಯ್ಯ ವಿರುದ್ಧ BSY ವಾಗ್ದಾಳಿ

ಬೆಂಗಳೂರು: ವಿಧಾನಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಕೊನೆ ಭಾಷಣ ಮಾಡಿದ್ದಾರೆ. ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಗೆಲ್ಲುವ ವಿಶ್ವಾಸವಿಲ್ಲ.

ಹಾಗಾಗಿ ಕ್ಷೇತ್ರ ಹುಡುಕಾಟ ನಡೆಸಿದ್ದಾರೆ. ಎಲ್ಲೇ ನಿಂತರೂ ಗೆಲ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಹಾಗಿದ್ರೆ ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾಕೆ ಸೋತ್ರ ಎಂದು ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತೆ ಬಾದಾಮಿ ಕ್ಷೇತ್ರಕ್ಕೆ ಯಾಕೆ ಹೋಗ್ತಿಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನಿಸುತತ್ತೇನೆ ಎಂದರು

ಇನ್ನು ನಾನು ಚಿನಾವಣೆಗೆ ನಿಲ್ಲಲ್ಲ ಅಂತಾ ಹೇಳಿದ್ದೇನೆ. ಮತ್ತೆ ನಾನು ಸದನದೊಳಗೆ ಬರುವ ಪ್ರಶ್ನೆಯೇ ಇಲ್ಲ. . ಬಿಎಸ್‌ ವೈ ಚುನಾವಣೆಗೆ ಸ್ಪರ್ಧಿಸಿ ಗೆಲ್ಲಬೇಕು ಎಂದು ವಿಪಕ್ಷಗಳ ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ , ಜೆಡಿಎಸ್‌ ಶಾಸಕ ಶಿವಲಿಂಗೇಗೌಡ ಒತ್ತಾಯಿಸಿದ್ದಾರೆ. ಮತ್ತೆ ಸದನದೊಳಗ್ಗೆ ಬರುವುದಿಲ್ಲ , ಚುನಾವಣೆಗೂ ಸ್ಪರ್ಧೆ ಮಾಡಲ್ಲ ಎಂದು ಖಡಕ್‌ ಆಗಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡುವ ವೇಳೆ ಬಿ.ಎಸ್‌ ಯಡಿಯೂರಪ್ಪ ಭಾವುಕರಾಗಿದ್ದಾರೆ.