ಬಾಬಾ ಬುಡನ್‌ ಗಿರಿ ದತ್ತಾತ್ರೇಯ ಪೀಠ ಪೂಜೆ ಸಲ್ಲಿಸುವ ವಿಚಾರ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

ಬಾಬಾ ಬುಡನ್‌ ಗಿರಿ ದತ್ತಾತ್ರೇಯ ಪೀಠ ಪೂಜೆ ಸಲ್ಲಿಸುವ ವಿಚಾರ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ ಗಿರಿ ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿ ವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.ಮೇಲ್ಮನವಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಮೇಲ್ಮನವಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು.್ಣಯ ಕುರಿತು ಸಲ್ಲಿಕೆಯಾಗಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ ನೀಡಿದೆ.