ಬಾಬಾಬುಡನ್​ಗಿರಿ ದತ್ತ ಜಯಂತಿಗೆ ಹೈಕೋರ್ಟ್ ಅಸ್ತು

ಬಾಬಾಬುಡನ್​ಗಿರಿ ದತ್ತ ಜಯಂತಿಗೆ ಹೈಕೋರ್ಟ್ ಅಸ್ತು

ಬೆಂಗಳೂರು: ಚಿಕ್ಕಮಗಳೂರಿನ ಬಾಬಾ ಬುಡನ್‌‌‌ ಗಿರಿ ದತ್ತ ಪೀಠದಲ್ಲಿ ಡಿ.6, 7 & 8ರಂದು ದತ್ತ ಜಯಂತಿ ಆಚರಿಸಲು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ಅನುಮತಿ ನೀಡಿದೆ. ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ. ಅಲೋಕ್ ಆರಾಧೆ & ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ‌ಈ ಆದೇಶ ನೀಡಿದೆ. ದತ್ತ ಜಯಂತಿಗೆ ಅನುಮತಿ ನೀಡಲು ಮನವಿ ಸಲ್ಲಿಸಲಾಗಿತ್ತು. ಅದರಂತೆ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅಸ್ತು ಎಂದಿದೆ & ವಿಚಾರಣೆಯನ್ನು ಜ.12ಕ್ಕೆ ಮುಂದೂಡಿದೆ