ಬಿಎಸ್ ವೈ ಮತ್ತು ಸಿಎಂ ಬೊಮ್ಮಾಯಿಗೆ ತಿರುಗೇಟು ನೀಡಿದ ಮಾಜಿ ಸಿ ಎಂ ಸಿದ್ದರಾಮಯ್ಯ

ಬಿಎಸ್ ವೈ ಮತ್ತು ಸಿಎಂ ಬೊಮ್ಮಾಯಿಗೆ ತಿರುಗೇಟು ನೀಡಿದ ಮಾಜಿ ಸಿ ಎಂ ಸಿದ್ದರಾಮಯ್ಯ

ಬೆಳಗಾವಿ ; ಡಿಕೆಶಿ ಮತ್ತು ಸಿದ್ಧರಾಮಯ್ಯ ನಡುವಿನ ಸಂಬಂಧ ಸರಿಯಾಗಿಲ್ಲ ಎಂದು ಆರೋಪಿಸಿದ್ದ ಬಿಜೆಪಿಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನಡುವಿನ ವಿಶ್ವಾಸ ಹಾಳಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಡಿ ಕೆ ಶಿವಕುಮಾರ್ ಮತ್ತು ನಾನು ಇಬ್ಬರು ಚೆನ್ನಾಗಿಯೇ ಇದ್ದೆವೆ. ಆದರೆ ಬಿ ಎಸ್‌ ವೈ ಮತ್ತು ಬೊಮ್ಮಾಯಿ ಸಂಬಂಧ ಚೆನ್ನಾಗಿದೆಯಾ..? ಬಿಎಸ್ ವೈ ಮತ್ತು ಬೊಮ್ಮಾಯಿ ಸಂಬಂಧ ಹಾಳಾಗಿದೆ ಎಂದರು.

ಇನ್ನು ಮುಂದಿನ ವಿಧಾನಸಭಾ ಚುನಾವಣೆಗೆ ವರುಣಾ ಕ್ಷೇತ್ರದಿಂಧ ಸ್ಪರ್ಧಿಸುವಂತೆ ನಮ್ಮ ಪುತ್ರ ಕೇಳುತ್ತಿದ್ದಾನೆ. ಚಾಮರಾಜಪೇಟೆಗೆ ಬನ್ನಿ ಎಂದು ಜಮೀರ್ ಕರೆಯುತ್ತಿದ್ದಾರೆ. ಕೋಲಾರದಲ್ಲಿ ಸ್ಪರ್ಧಿಸುವಂತೆ ಕ್ಷೇತ್ರದ ಜನರು ಆಹ್ವಾನಿಸಿದ್ದಾರೆ ಎಂದು ಸಿದ್ಧರಾಮಯ್ಯ ತಿಳಿಸಿದರು.