ಬಿಜೆಪಿ ಕಾರ್ಯಕರ್ತರು ಮೈಮರೆತರೆ ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಬರುತ್ತೆ : ಸಂಸದ ಪ್ರತಾಪ್ ಸಿಂಹ ಹೇಳಿಕೆ

ಮೈಸೂರು : ಬಿಜೆಪಿ ಕಾರ್ಯಕರ್ತರು ಮೈಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಬಿಜೆಪಿ ಪ್ರಮುಖರ ಸಭೆಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಕಾರ್ಯಕರ್ತರು ಮೈಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರಲಿದೆ.ಆದ್ದರಿಂದ ಬಿಜೆಪಿ ರಾಷ್ಟ್ರೀಯವಾದ ಸರ್ಕಾರವನ್ನು ತರಲು ಬಿಜೆಪಿ ಕಾರ್ಯಕರ್ತರು ಪ್ರಯತ್ನಿಸಬೇಕು ಎಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಮದುವೆ, ಇತರೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು. ಆದರೆ ದುಷ್ಕರ್ಮಿಗಳಿಂದ ಹತ್ಯೆ ರಾಜುವಿನ ಮನೆಗೆ ಭೇಟಿ ನೀಡಲಿಲ್ಲ.ಕೆಎಫ್ ಡಿ, ಪಿಎಫ್ ಐ ಸಂಘನಟೆಯ 175 ಸದಸ್ಯರ ಮೇಲಿನ ಕೇಸ್ ವಾಪಸ್ ಪಡೆದ್ರು, ಇದರಿಂದ 2 ಡಜನ್ ಹಿಂದೂ ಕಾರ್ಯಕರ್ತರ ಹತ್ಯೆಆಗಿತ್ತು. ಈಗ ಮತ್ತೆ ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಲು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ನಮ್ಮ ಕಾರ್ಯಕರ್ತರು ಮೈಮರೆಯಬಾರದು ಎಂದು ಹೇಳಿದ್ದಾರೆ.