ಬಿಜೆಪಿ ಕೇಂದ್ರೀಯ ಶಿಸ್ತುಸಮಿತಿ ನೋಟಿಸ್ ವಿಚಾರ : ಶಾಸಕ ಯತ್ನಾಳ್ ಹೇಳಿದ್ದೇನು ಗೊತ್ತಾ?

ವಿಜಯಪುರ : ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್ ವಿಚಾರದ ಕುರಿತಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಇದೆಲ್ಲ ವದಂತಿ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾಕೆ ನೋಟಿಸ್ ನೀಡಿಲ್ಲ ಎಂದು ಕೆಲವರಿಗೆ ಕಾಡುತ್ತಿದೆ. ಅದಕ್ಕೆ ಇಂತಹ ಊಹಾಪೋಹ ಹರಡಿಸುತ್ತಿದ್ದಾರೆ. ಇದೆಲ್ಲವೂ ರಾಜಕೀಯ ವಿರೋಧಿಗಳ ಷಡ್ಯಂತ್ರ ಅಷ್ಟೇ. ವಾಜಪೇಯಿ ಪ್ರಧಾನಿ ಆಗಿದ್ದಾಗಲೂ ನನಗೆ ನೋಟಿಸ್ ನೀಡಿದ್ದರು. ನೋಟಿಸ್ ನೀಡಿದ ಮೂರೇ ತಿಂಗಳಲ್ಲಿ ನಾನು ಕೇಂದ್ರ ಸಚಿವನಾಗಿದ್ದೆ ಎಂದು ಶಾಸಕ ಯತ್ನಾಳ್ ತಿಳಿಸಿದರು.
ನನಗೆ ಯಾವುದೇ ಶಿಸ್ತು ಕ್ರಮದ ನೋಟಿಸ್ ಬಂದಿಲ್ಲ. ಹಾಗೆ ಶಿಸ್ತು ಸಮಿತಿ ನೋಟಿಸ್ ಕಳುಹಿಸೋ ಪಕ್ಷ ವಿರೋಧಿ ಹೇಳಿಕೆಯನ್ನು ನಾನು ನೀಡಿಲ್ಲ. ಇದೆಲ್ಲಾ ಊಹಾಪೋಹವಷ್ಟೇ ಎಂದು ಹೇಳಿದ್ದಾರೆ.