ಬಿಜೆಪಿ ಕೋಮುವಿಷ ಬೀಜ ಬಿತ್ತಿ ಯುವಕರ ಭವಿಷ್ಯ ಹಾಳು ಮಾಡುತ್ತಿದೆ : ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಬೆಂಗಳೂರು : ಕೋಮುವಿಷ ಬೀಜ ಬಿತ್ತಿ ಯುವಕರ ಭವಿಷ್ಯ ಹಾಳು ಮಾಡುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮುವಿಷ ಬೀಜ ಬಿತ್ತಿ ಯುವಕರ ಭವಿಷ್ಯ ಹಾಳು ಮಾಡುವ ಕೆಲಸ ಬಿಜೆಪಿ ಮಾಡುತ್ತಿದೆ. ಶೋಭಾ ಕರಂದ್ಲಾಜೆ ಪರೇಶ್ ಮೇಸ್ತ ಸಾವಿಗೆ ಜಿಹಾದಿ ಶಕ್ತಿಗಳು ಕಾರಣ ಎಂದಿದ್ದರು. ಚಿತ್ರ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದಿದ್ದರು. ಪರೇಶ್ ಮೇಸ್ತ ಕೈ ಕಡಿಯಲಾಗಿದೆ ಎಂದು ಹೇಳಿದ್ದರು. ನಿಮಗೆ ಮಾನವೀಯತೆ ಇದ್ದರೆ ಪರೇಶ್ ಮೇಸ್ತ ಕುಟುಂಬದ ಕ್ಷಮೆ ಕೇಳಿ ಎಂದಿದ್ದಾರೆ.
ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಈವರೆಗೆ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ?ಹಲವು ಬಾರಿ ಪ್ರಶ್ನೆ ಮಾಡಿದರೂ ಸರ್ಕಾರ ಉತ್ತರಿಸಿಲ್ಲ. ಹೀಗಾಗಿ ಸೇ ಸಿಎಂ ಅಭಿಯಾನ ಆರಂಭಿಸಲಾಗುವುದು. ಸಿಎಂ ಮೂಕ ಬಸವನ ರೀತಿ ಕುಳಿತರೆ ಆಗಲ್ಲ. ಸಾರ್ವಜನಿಕರಿಗೆ ಉತ್ತರ ಕೊಡಬೇಕು ಎಂದರು.