ಬಿಜೆಪಿ ಮಾಜಿ ಶಾಸಕ ಎನ್.ವೈ ಗೋಪಾಲಕೃಷ್ಣ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಮಾಜಿ ಶಾಸಕ ಎನ್.ವೈ ಗೋಪಾಲಕೃಷ್ಣ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಕೂಡ್ಲಿಗಿ ಕ್ಷೇತ್ರದಿಂದ ಬಿಜೆಪಿಯಿಂದ ಗೆದ್ದು, ಶಾಸಕರಾಗಿದ್ದಂತ ಎನ್ ವೈ ಗೋಪಾಲಕೃಷ್ಣ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಅಂಗೀಕಾರ ಕೂಡ ಆಗಿದೆ. ಇಂದು ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕೂಡ್ಲಿಗೆ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಎಂಎಲ್ಸಿಗಳಾದ ಪ್ರಕಾಶ್ ರಾಥೋಡ್, ದಿನೇಶ್ ಗೂಳಿಗೌಡ, ಮಾಜಿ ಮೇಯರ್ ಜೆ ಹುಚ್ಚಪ್ಪ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಹೈಡ್ರಾಮಾ: ಡಾ.ಯೋಗೀಶ್ ಬಾಬುಗೆ ಟಿಕೆಟ್ ನೀಡುವಂತೆ ಸಿದ್ಧರಾಮಯ್ಯಗೆ ಕಾರ್ಯರರ್ತರ ಒತ್ತಾಯ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಗಾಗಿ ( Congress Ticket ) ಫೈಟ್ ಜೋರಾಗಿದೆ. ಅದರಲ್ಲೂ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ( Molakalmuru Assembly ) ಟಿಕೆಟ್ ಫೈಟ್ ಮಾತ್ರ ತೀವ್ರಗೊಂಡಿದೆ. ಈ ಕಾರಣದಿಂದಾಗಿಯೇ ಇಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಅವರ ಕಾರಿಗೆ ಮುತ್ತಿಗೆ ಹಾಕಿರುವಂತ ಕಾರ್ಯಕರ್ತರು, ಡಾ.ಯೋಗೀಶ್ ಬಾಬು ( Dr Yogish Babu ) ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯ ( KPCC Office ) ಮುಂದೆ ಟಿಕೆಟ್ ಆಕಾಂಕ್ಷಿಗಳ ಪರ ಕಾರ್ಯಕರ್ತರ ಹೈ ಡ್ರಾಮಾವೇ ನಡೆದಿದೆ. ಅದರಲ್ಲೂ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪರ ಕಾರ್ಯಕರ್ತರು ಬೀದಿಗೆ ಇಳಿದಿದ್ದಾರೆ. ಮೊಳಕಾಲ್ಮೂರು ಕ್ಷೇತ್ರದಿಂದ ಡಾ.ಯೋಗೀಶ್ ಬಾಬುಗೆ ಟಿಕೆಟ್ ನೀಡುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಕಾರಿಗೆ ಮುತ್ತಿಗೆ ಹಾಕಿ ಒತ್ತಾಯಿಸಿದ್ದಾರೆ.

ಅಂದಹಾಗೇ ಮೊಳಕಾಲ್ಮೂರು ಕ್ಷೇತ್ರದಲ್ಲಿ ಈ ಹಿಂದೆ ಮಾಜಿ ಶಾಸಕ ತಿಪ್ಪೇಸ್ವಾಮಿ ಹಾಗೂ ಡಾ.ಯೋಗೀಶ್ ಬಾಬು ನಡುವೆ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕಾಂಗ್ರೆಸ್ ಟಿಕೆಟ್ ಕೈ ತಪ್ಪುವ ಸುಳಿವಿನಿಂದ ತಿಪ್ಪೇಸ್ವಾಮಿ ಕೈ ಪಕ್ಷಕ್ಕೆ ಗುಡ್ ಬೈ ಹೇಳಿ, ಬಿಜೆಪಿ ಸೇರ್ಪಡೆಗೊಂಡಿದ್ದರು. ಹೀಗಾಗಿ ಡಾ.ಯೋಗೀಶ್ ಬಾಬುಗೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಟಿಕೆಟ್ ಫಿಕ್ಸ್ ಎಂದೇ ಹೇಳಲಾಗುತ್ತಿತ್ತು.

ಆದ್ರೇ ಬದಲಾದ ಪರಿಸ್ಥಿತಿಯಲ್ಲಿ ಕೂಡ್ಲಿಗಿ ಕ್ಷೇತ್ರದಿಂದ ಬಿಜೆಪಿ ಪಕ್ಷದ ಶಾಸಕರಾಗಿದ್ದಂತ ಎನ್ ವೈ ಗೋಪಾಲಕೃಷ್ಣ, ಕಮಲ ಬಿಟ್ಟು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಅವರು ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡ ಎನ್ ವೈ ಗೋಪಾಲಕೃಷ್ಣ ಹಾಗೂ ಡಾ.ಯೋಗೀಶ್ ಬಾಬು ನಡುವೆ ಈಗ ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಗಾಗಿ ಬಿಗ್ ಫೈಟ್ ಶುರುವಾದಂತೆ ಆಗಿದೆ. ಈ ಹಣಾಹಣಿಯ ನಡುವೆ ಕಾಂಗ್ರೆಸ್ ಪಕ್ಷದಿಂದ ಯಾರಿಗೆ ಟಿಕೆಟ್ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ವಸಂತ ಬಿ ಈಶ್ವರಗೆರೆ