ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಪುನರ್ ರಚನೆ; 11 ಸದಸ್ಯರ ಪಟ್ಟಿಯಲ್ಲಿ ಯಡಿಯೂರಪ್ಪಗೂ ಸ್ಥಾನ

ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಪುನರ್ ರಚನೆ; 11 ಸದಸ್ಯರ ಪಟ್ಟಿಯಲ್ಲಿ ಯಡಿಯೂರಪ್ಪಗೂ ಸ್ಥಾನ

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿ ಪುನರ್ ರಚನೆ ಮಾಡಿದ್ದು, 11 ಸದಸ್ಯರ ಈ ಪಟ್ಟಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಸ್ಥಾನ ಸಿಕ್ಕಿದೆ.

ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರು ಇಳಿದ ಬಳಿಕ ಬಿಜೆಪಿಯಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಿರಲಿಲ್ಲ ಎಂಬ ಅಸಮಾಧಾನ ಬೆಂಬಲಿಗರಿಂದ ಕೇಳಿ ಬರುತ್ತಿತ್ತು.

ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡುವ ಮೂಲಕ ಯಡಿಯೂರಪ್ಪನವರನ್ನು ಚುನಾವಣೆಯಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಲು ಪಕ್ಷ ಮುಂದಾಗಿದೆ ಎನ್ನಲಾಗಿದೆ.