ಬಿಜೆಪಿ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಕಣ್ಣಿಗೆ ಎಣ್ಣೆ ಬಿಡ್ಕೊಂಡು ಯಾತ್ರೆ, ಸಮಾವೇಶಗಳನ್ನು ಮಾಡಿ ಜನರ ಮನ ಮುಟ್ಟುತ್ತಿದ್ದಾರೆ. ಜಿಲ್ಲೆಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ವಿಚಾರವೇ ಚುನಾವಣಾ ಅಸ್ತ್ರವಾಗಿದೆ. ಸಂತ್ರಸ್ತರ ಸಮಸ್ಯೆ ಮುಂದಿಟ್ಟು ರಾಜಕೀಯ ಲಾಭ ಮಾಡಿಕೊಳ್ಳಲು ರಾಜಕೀಯ ಪಕ್ಷಗಳು ಮುಂದಾಗಿವೆ. ಶರಾವತಿ ಸಂತ್ರಸ್ತರ ಸಮಸ್ಯೆ ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಇಂದು ಕಾಂಗ್ರೆಸ್ ಹೋರಾಟಕ್ಕೆ ಇಳಿದಿದೆ.